Kannada NewsKarnataka NewsLatest

*ಭೀಕರ ಅಪಘಾತ: ವ್ಯಕ್ತಿಯ ತಲೆಯ ಮೇಲೆ ಹರಿದ ಟ್ರಕ್: ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಕಟ್ಟಡ ಕಾರ್ನಿಕನೊಬ್ಬನಿಗೆ ಟ್ರಕ್ ಡಿಕ್ಕಿ ಹೊಡೆದು ಆತನ ತಲೆಯಮೇಲೆಯೇ ಟ್ರಕ್ ಚಕ್ರ ಹರಿದು ಹೋದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಿಹಾರದ ಮೂಲದ ಬಾಬುಜೀ ಮಿಯಾ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಮೃತ ಬಾಬುಜೀ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇಂದು ಕೆಲಸಕ್ಕಾಗಿ ಉತ್ತರಳ್ಳಿಯಿಂದ ಸರ್ಜಾಪುರದ ಕಡೆಗೆ ಹೋಗುತ್ತಿದ್ದಾಗ ಎಲೆಕ್ಟ್ರಾನಿಕ್ ಸಿಟಿ ನೈಸ್ ಟೋಲ್ ಬಳಿ ಅಪಘಾತ ಸಂಭವಿಸಿದೆ. ಇನ್ನೂ ಘಟನೆ ಬಳಿಕ ಟ್ರಕ್ ಚಾಲಕ ಟ್ರಕ್‌ ಸಮೇತ ಎಸ್ಕೇಪ್‌ ಆಗಿದ್ದಾನೆ.

ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button