
ಪ್ರಗತಿವಾಹಿನಿ ಸುದ್ದಿ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಬರಾಬಂಕಿಯ ಲಖನೌ-ಬಹ್ರಿಚ್ ರಾಷ್ಟ್ರೀಯ ಹೆದ್ದರಿಯಲ್ಲಿ ಈ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



