Kannada NewsLatestNational

*ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ಯಪ್ರದೇಶದ ಚಿತ್ರಕೂಟ ಬಳಿಯ ಅಮನ್ ಪುರದಲ್ಲಿ ನಡೆದಿದೆ.

ಟ್ರಕ್ ಹಾಗೂ ಇ-ರೀಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಝಾನ್ಸಿ-ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್ ಪಿ ಚಕ್ರಪಾಣಿ ತ್ರಿಪಾಠಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button