*ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ಯಪ್ರದೇಶದ ಚಿತ್ರಕೂಟ ಬಳಿಯ ಅಮನ್ ಪುರದಲ್ಲಿ ನಡೆದಿದೆ. ಟ್ರಕ್ ಹಾಗೂ ಇ-ರೀಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಝಾನ್ಸಿ-ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್ ಪಿ ಚಕ್ರಪಾಣಿ ತ್ರಿಪಾಠಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. *ದಾಖಲೆಯಿಲ್ಲದ 8 ಲಕ್ಷ ಹಣ ವಶಕ್ಕೆ*