Cancer Hospital 2
Beereshwara 36
LaxmiTai 5

*ಟ್ರಕ್ ಓವರ್ ಟೇಕ್ ಮಾಡುವ ವೇಳೆ ಅಪಘಾತ: ಬೈಕ್ ಸವಾರ ಸಾವು*

Anvekar 3

ಪ್ರಗತಿವಾಹಿನಿ ಸುದ್ದಿ: ಟ್ರಕ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಇನ್ನೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವುನ್ನಪ್ಪಿರುವ ಘಟನೆ ಖಾನಾಪುರದಲ್ಲಿ ನಡೆದಿದೆ.

Emergency Service

ಖಾನಾಪುರದ ಮರಿಯಮ್ಮ ಮಂದಿರದ ಹಲಕರ್ಣಿ ಸರ್ಕಲ ಬಳಿ ದ್ವಿಚಕ್ರ ವಾಹನ ಸವಾರನೊಬ್ಬ ಟ್ರಕ್ ಓವ‌ರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಇನ್ನೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯ ಹಿಂಬದಿ ಚಕ್ರಕ್ಕೆ ಕಾಲು ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ.

ಕೂಡಲೇ ಖಾನಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬೆಳಗಾವಿಯ ಸಿವಿಲ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ. ಈ ಅಪಘಾತದಲ್ಲಿ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Bottom Add3
Bottom Ad 2