
ಪ್ರಗತಿವಾಹಿನಿ ಸುದ್ದಿ: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ ಸಂಭವಿಸಿದ್ದು, ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈವರೆಗೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು,
ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಮೂವರು ಐಸಿಯುನಲ್ಲಿದ್ದಾರೆ. 7 ಮಂದಿ ಗಾಯಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚುವ ಸಾದ್ಯತೆ ಇದೆ.
ಪ್ರವೀಣ್ ಕುಮಾರ್, ಅಂತಿಮ ಬಿಇ ವಿದ್ಯಾರ್ಥಿ, ಬಳ್ಳಾರಿ. ರಾಜೇಶ ಬಿನ್ ಮೂರ್ತಿ 17 ವರ್ಷ ಕೆ.ಬಿ.ಪಾಳ್ಯ, ಹಳೆಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು. ಈಶ್ವರ ಬಿನ್ ರವಿಕುಮಾರ (17) ಡನಾಯಕನಹಳ್ಳಿ ಕೊಪ್ಪಲು, ಹೊಳೆನರಸೀಪುರ ತಾಲೂಕು. ಗೋಕುಲ ಬಿನ್ ಸಂಪತ್ ಕುಮಾರ್ (17) ಮುತ್ತಿಗೆಹೀರಳ್ಳಿ ಗ್ರಾಮ, ಹೊಳೆನರಸೀಪುರ ತಾಲ್ಲೂಕು. ಕುಮಾರ ಬಿನ್ ತಿಮ್ಮಯ್ಯ (25) ಕಬ್ಬಿನಹಳ್ಳಿ ಗ್ರಾಮ, ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು. ಪ್ರವೀಣ ಬಿನ್ ಹನುಮಯ್ಯ (25) ಕಬ್ಬಿನಹಳ್ಳಿ. ಪ್ರವೀಣ ಬಿನ್ ಹನುಮಯ್ಯ (25) ಕಬ್ಬಿನಹಳ್ಳಿ ಗ್ರಾಮ ಹಳೇಕೋಟೆ ಹೋಬಳಿ, ಹೊಳೆನರಸೀಪುರ ತಾಲ್ಲೂಕು. ಮಿಥುನ್ ಬಿನ್ ವಿಜಯ್ (23) ಗವಿಗಂಗಾಪುರ ಗ್ರಾಮ, ಹೊಸದುರ್ಗ ತಾಲೂಕು ಚಿತ್ರದುರ್ಗ ಜಿಲ್ಲೆ. ಸುರೇಶ ಬಿನ್ ರಮೇಶ ಬಿಇ ವಿದ್ಯಾರ್ಥಿ ಮಣೆನಹಳ್ಳಿ ಮರ್ಲೆ ಗ್ರಾಮ, ಚಿಕ್ಕಮಗಳೂರು ಜಿಲ್ಲೆ. ಪ್ರಭಾಕರ್ (55) ಬಂಟರಹಳ್ಳಿ, ಹಾಸನ ತಾಲ್ಲೂಕಿನವರು ಎಂದು ಗುರುತಿಸಲಾಗಿದೆ.
ಇನ್ನು ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗ್ರಾಮಸ್ಥರು ಗಣಪತಿ ಕೂರಿಸುತ್ತಿದ್ದಾರೆ. ರಾತ್ರಿ ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಯಮಸ್ವರೂಪಿ ಟ್ರಕ್ ಹರಿದು ಈ ದುರಂತ ಸಂಭವಿಸಿದೆ.