*ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ ಸಂಭವಿಸಿದ್ದು,  ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈವರೆಗೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು,  ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಮೂವರು ಐಸಿಯುನಲ್ಲಿದ್ದಾರೆ. 7 ಮಂದಿ ಗಾಯಳುಗಳಿಗೆ … Continue reading *ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ*