ಪ್ರಗತಿವಾಹಿನಿ ಸುದ್ದಿ: ಟ್ರಕ್ ಪಲ್ಟಿಯಾಗಿ ಐವರು ಸಾವನ್ನಪ್ಪಿದ್ದು ಹಲವಾರು ಜನ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ.
ಜಗದಲ್ಪುರದ ಚಂದಮೇಟಾ ಗ್ರಾಮದ ಬಳಿ 45 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪರಿಣಾಮ 5 ಜನ ಸಾವನ್ನಪ್ಪಿದ್ದಾರೆ.
ಯಾವುದೋ ಕಾರ್ಯದ ನಿಮಿತ್ತ 45 ಜನರು ಒಂದೇ ಟ್ರಕ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಟ್ರಕ್ ಏಕಾಏಕಿ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ, ಪರಿಣಾಮ ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಯಲ್ಲಿ ಕೊನೆಯುಸಿಳೆದಿದ್ದಾರೆ.
ದುರ್ಘಟನೆಯ ಬಗ್ಗೆ ಮಾಹಿತಿ ತಿಳಿದ ಸಿಆರ್‌ಪಿಎಫ್ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಸುಮಾರು 30 ಜನ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದರ್ಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ