
ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯ ಧಾರಾಪುರಂ ನಲ್ಲಿ ನಡೆದಿದೆ.
ಟ್ಯಾಂಕರ್ ಟ್ರಕ್ ಕೊಯಮತ್ತೂರು ಜಿಲ್ಲೆಯ ಇರಗೂರಿನಿಂದ ದ್ರಾಪುರಂ ಪಳನಿ ರಸ್ತೆಯ ಮನಕೌಡ್ ಬಳಿ ಪೆರೋಲ್ ದಾಗಿಸುತ್ತಿದ್ದಾಗ ಪಳನಿಗೆ ಮದುವೆಸಮಾರಂಭಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ತಮಿಳುಮಣಿ(51), ಚಿತ್ರ (49), ಸೆಲ್ವರಾಣಿ(70), ಬಾಲಕೃಷ್ಣ (78), ಕಲಾರಾಣಿ(50) ಎಂದು ಗುರುತಿಸಲಾಗಿದೆ.
ಘಟನೆ ಬಗ್ಗೆ ಸಂತಾಪ ಸೂಚಿಸಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ