Latest

*ಭೀಕರ ರಸ್ತೆ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದಾರಿ ಬಳಿ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು ಚಾಲಕ ನಿದ್ದೆ ಮಂಪರಿನಲ್ಲಿ ಗಾಡಿ ಓಡಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲಿಸಿದ್ದಾರೆ.

Related Articles

Back to top button