*ಮತ್ತೊಂದು ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಲು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿಯಲ್ಲಿ ಸಂಭವಿಸಿದೆ. ಏಳು ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ತಿರುತ್ತಣಿ ಬಳಿ ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿ ಕಾರು ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕನಗಮ್ಮಛತ್ರಂ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರತೆಗೆಯುವುದೇ ಕಷ್ಟದ ಕೆಲಸವಾಗಿದೆ. … Continue reading *ಮತ್ತೊಂದು ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು*