Latest
ಮೊಹಮ್ಮದ್ ನಲಪಾಡ್ ವಿರುದ್ಧ ಎಫ್ ಐಆರ್ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಬೆಂಗಳೂರು ಹಲಸೂರು ಗೇಟ್ ಠಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಹಿನ್ನೆಲೆಯಲ್ಲಿ ಬಿಬಿಎಂಪಿ ಕಂದಾಯ ಅಧಿಕಾರಿ ಚಂದ್ರಕಾಂತ್ ಮೊಹಮ್ಮದ್ ನಲಪಾಡ್ ವಿರುದ್ಧ ದೂರು ದಾಖಲಿಸಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕೆ ಟೌನ್ ಹಾಲ್ ಮುಂಭಾಗ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅನಧಿಕೃತ ಫ್ಲೆಕ್ಸ್ ಅಳವಡಿಕೆ ಮಾಡಿದ ನೆಲಪಾಡ್ ಹಾಗೂ ಟೀಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲಸೂರು ಗೇಟ್ ಠಾಣೆಯಲ್ಲಿ ದೂರು ನೀಡಲಾಗಿದೆ.
ನರೇಂದ್ರ ಮೋದಿ ಟಾರ್ಗೆಟ್ ಮಾಡಿಯೇ ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟಿಸಿದ್ದ ಉಗ್ರರು




