ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಮುದ್ರದಲ್ಲಿ ಟ್ರಫ್ (ಗಾಳಿ ದಿಕ್ಕಿನಲ್ಲಿ ಬದಲಾವಣೆ) ಪರಿಣಾಮದಿಂದಾಗಿ ವಾತಾವರಣದಲ್ಲಿ ಬದಲಾವಣೆಯುಂಟಾಗಿದ್ದು, ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟ್ರಫ್ ಪ್ರಭಾವ ಹೆಚ್ಚಾಗಿದ್ದು, ಹಿಂಗಾರು ಮಳೆ ಅಬ್ಬರ ಜೋರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮೂರು ದಿನ ಭಾರಿ ಮಳೆಯಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುತ್ತಿದೆ.
ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿಗೆ ಹೆಚ್ಚಿನ ಮಳೆಯ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರಿನಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಎ.ಪ್ರಸಾದ್ ತಿಳಿಸಿದ್ದಾರೆ. ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ