
ಪ್ರಗತಿವಾಹಿನಿ ಸುದ್ದಿ: ಟ್ರಕ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 13 ಜನರು ಗಾಯಗೊಂಡಿರುವ ಘಟನೆ ಗೋವಾದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರಕ್ ಕಂದಕ್ಕಕೆ ಉರುಳಿ ಬಿದ್ದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಐವರು ಮಕ್ಕಳು ಸೇರಿದಂತೆ 13 ಜನರು ಗಾಯಗೊಂಡಿದ್ದಾರೆ.
ಸ್ಥಳಕ್ಕಾಗಮಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್ ಹಾಗೂ ಸಚಿವ ಫಲ್ ದೇಸಾಯಿ ಅಗ್ನಿಶಮಕ ಸಿಬ್ಬಂದಿ ಹಾಗೂ ತುರ್ತು ಸೇವೆ ಸಿಬ್ಬಂದಿಗಳ ಜೊತೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಗಾಯಾಳುಗಳನ್ನು ಪಣಜಿ ಬಳಿಯ ಗೋವಾ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ