![](https://pragativahini.com/wp-content/uploads/2025/02/IMG_20250214_112636_650_x_350_pixel.jpg)
ಪ್ರಗತಿವಾಹಿನಿ ಸುದ್ದಿ: 2008 ನವೆಂಬರ್ 26ರಂದು ಮುಂಬೈನಲ್ಲಿ ನಡೆದ ಭೀಕರ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ತಹವೂರ್ ಹುಸೇನ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮೋದನೆ ನೀಡಿದ್ದಾರೆ.
ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ಮೋದಿ ನಡುವೆ ಶ್ವೇತ ಭವನದಲ್ಲಿ ನಡೆದ ದೀಪಕ್ಷಿಯ ಸಭೆಯ ಬಳಿಕ ಸಂಚುಕೋರ ತಹವೂರ್ ಹುಸೇನ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಘೋಷಣೆ ಮಾಡಿದರು.
2008ರ ಮುಂಬೈ ಭಯೋತ್ಪಾದಕ ದಾಳಿಯೊಂದಿಗೆ ಸಂಬಂಧ ಹೊಂದಿರುವ ಸಂಚುಕೋರ ತಹವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ನಮ್ಮ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಲು ಸಂತೋಷವಾಗುತ್ತಿದೆ ಎಂದು ಟ್ರಂಪ್ ಹೇಳಿದರು.
ತಹವೂರ್ ರಾಣಾ ಪಾಕಿಸ್ತಾನಿ ಮೂಲದ ಕೆನಡಾ ಪ್ರಜೆಯಾಗಿದ್ದು ಯಾವುದೋ ಪ್ರಕರಣದ ಸಂಬಂಧ ಅಮೆರಿಕ ಪೊಲೀಸರು ಬಂಧಿಸಿದ್ದರು. ಈತ 26/11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಡೇವಿಡ್ ಕೋಲ್ಡನ್ ಹೆಡ್ಲಿಯ ಆಪ್ತನಾಗಿದ್ದ ಅಷ್ಟೇ ಅಲ್ಲದೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ