ಪ್ರಗತಿವಾಹಿನಿ ಸುದ್ದಿ: ಬಿದರ್ ಜಿಲ್ಲೆಯ ಬಾಲ್ಕಿ ಮೂಲದ ಗುತ್ತಿಗೆದಾರ ಸಚಿನ್ ಸೂಸೈಡ್ ಕೇಸ್ ನಲ್ಲಿ ಪ್ರಿಯಾಂಕ್ ಖರ್ಗೆ ಪಾತ್ರವಿಲ್ಲ. ಈ ಬಗ್ಗೆ ಸಿಐಡಿ ತನಿಖೆಗೆ ಅದೇಶಿಸಲಾಗಿದ್ದು, ಸತ್ಯಾಸತ್ಯತೆ ಹೊರಬರಲಿದೆ ಎಂದು ಗೃಹ ಸಚಿ ಡಾ. ಪರಮೇಶ್ವರ ಅವರು ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗ ಮೇಲೆ ಅನಾವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕೂ ಸರಿ ಎನಿಸುವುದಿಲ್ಲ. ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಸಿಎಂ ಅವರ ಜೊತೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ.
ಇನ್ನು ಬೆಳಗಾವಿ ಅಧಿವೇಶನ ಸಂದರ್ಭ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಆ ಕೇಸ್ ನ ಸಹ ಸಿಓಡಿಗೆ ವಹಿಸಲಾಗಿದೆ. ತನಿಖೆ ನಡೆಯುತ್ತಿದೆ. ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾಣವಾಗಿದ್ದು, ಪ್ರಕ್ರಿಯೆಗಳು ಆರಂಭವಾಗಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ