
ಪ್ರಗತಿವಾಹಿನಿ ಸುದ್ದಿ, ಶಿರಸಿ: ಗ್ರಹಣಮೋಕ್ಷ ಕಾಲಕ್ಕೆ ಉಂಟಾದ ಗೊಂದಲಕ್ಕೆ ಸಂಬಂಧಿಸಿ ಜ್ಯೋತಿಷ್ಯಾಸ್ತ್ರದ ವಿದ್ವಾಂಸರು ನೀಡಿದ ಸ್ಪಷ್ಟ ಅಭಿಪ್ರಾಯ ವಿಳಂಬವಾಗಿ ಸಿಕ್ಕಿದ್ದರಿಂದ ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದ ವಿಷಯದಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ ಮರು ಪ್ರಕಟನೆ ನೀಡಿದೆ.

ಅ.೨೫ ಮಂಗಳವಾರ ಸಂಜೆ ೫ ಘಂಟೆ ೪ ನಿಮಿಷಕ್ಕೆ ಸೂರ್ಯಗ್ರಹಣದ
ಸ್ಪರ್ಶಕಾಲವಾಗಲಿದೆ. ೫-೪೮ ನಿಮಿಷಕ್ಕೆ ಮಧ್ಯಕಾಲವಾಗಿದೆ. ೬-೨೯ ನಿಮಿಷಕ್ಕೆ ಮೋಕ್ಷಕಾಲ ಇದೆ.
ಆದ್ಯಂತ ಪುಣ್ಯಕಾಲ ೧ ಘಂಟೆ ೨೫ ನಿಮಿಷಗಳಾಗಿವೆ. ಸೂರ್ಯಾಸ್ತದ ನಂತರವೂ ಗ್ರಹಣ ಮುಂದುವರೆದಿದೆ.
ಆದ್ದರಿಂದ ಗ್ರಹಣಮೋಕ್ಷದ ನಂತರ ಸ್ನಾನ ಮಾಡಿ, ಲಘು ಉಪಹಾರವನ್ನು ಸ್ವೀಕರಿಸಬಹುದಾಗಿದೆ ಎಂದಿದೆ. ಮರುದಿನ ಬೆಳಿಗ್ಗೆ ಸೂಯೋದಯದ ನಂತರ ಸೂರ್ಯಬಿಂಬ ನೋಡಿ, ಸ್ನಾನ ಮಾಡಿ ಭೋಜನ ಮಾಡಬೇಕಿದೆ.
ಈ ಎರಡು ಬದಲಾವಣೆಗಳೊಂದಿಗೆ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳವರ ಅಪ್ಪಣೆಯಂತೆ ಪ್ರಕಟಣೆ
ನೀಡಲಾಗಿದೆ ಎಂದು ತಿಳಿಸಲಾಗಿದೆ.
https://pragati.taskdun.com/latest/government-releases-the-time-of-eclipse-in-indian-cities/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ