ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕದ ಕಾರ್ಯ ನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಬೆಳಗಾವಿಯಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮ ನಡೆಯಲಿದೆ.
ಕೆಎಲ್ಇ ಜೀರಗೆ ಸಭಾಭವನದಲ್ಲಿ ಅಂಜು ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಖ್ಯಾತ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಉಪನ್ಯಾಸ ನೀಡಲಿದ್ದಾರೆ.
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಉದ್ಘಾಟಿಸುವರು. ಕೆಯುಡಬ್ಲ್ಯುಜೆ ಜಿಲ್ಲಾ ಗೌರವಾಧ್ಯಕ್ಷ ಭೀಮಶಿ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷಠಾಧಿಕಾರಿ ಡಾ.ಸಂಜೀವ ಪಾಟೀಲ, ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ್, ಕೆಯುಡಬ್ಲ್ಯುಜೆ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ ಆಗಮಿಸಲಿದ್ದು, ಕೆಯುಡಬ್ಲ್ಯುಜೆ ಜಿಲ್ಲಾಧ್ಯಕ್ಷ ದಿಲೀಪ ಕುರಂದವಾಡೆ ಆಶಯ ನುಡಿಗಳನ್ನಾಡಲಿದ್ದಾರೆ.
ಏರ್ ಇಂಡಿಯಾದಲ್ಲಿ ಉದ್ಯೋಗಾವಕಾಶ; ಅರ್ಜಿ ಆಹ್ವಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ