ಬೆಳಗಾವಿಗೆ ಮಂಗಳವಾರ ಯಡಿಯೂರಪ್ಪ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ-
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆಗೆಂದು ಅವರು ಆಗಮಿಸುವರು.
ಬೆಳಗ್ಗೆ 10.30ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು 11.50ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ, ಅಲ್ಲಿಂದ ರಸ್ತೆಯ ಮೂಲಕ ಹೊರಟು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಶಾಸಕರು, ಸಂಸದರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, 4.25ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗುವರು.
ಇವುಗಳನ್ನೂ ಓದಿ –
ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದ ಯಡಿಯೂರಪ್ಪ ಕಾಲೆಳೆದ ಟ್ರೋಲಿಗರು
ಮೋದಿ ಭೇಟಿಯಾದ ಯಡಿಯೂರಪ್ಪ ನಿಯೋಗಕ್ಕೆ ನಿರಾಸೆ: ಕೇಂದ್ರದಿಂದ ಸಧ್ಯ ಪರಿಹಾರ ಸಾಧ್ಯತೆ ಇಲ್ಲ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ