Kannada NewsKarnataka News

ಮಂಗಳವಾರ ಸಾರ್ವಜನಿಕ ಅಹವಾಲು ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಮಂಗಳವಾರ ಬೆಳಗಾವಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವರು.

ರಾಣಿ ಚನ್ನಮ್ಮ ನಗರದ 2ನೇ ಸ್ಟೇಜ್ ನಲ್ಲಿರುವ ಸ್ಟೇಟ್ ಬ್ಯಾಂಕ್ ಎದುರು ಗಾಯತ್ರಿ ಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಅಹವಾಲುಗಳನ್ನು ಸ್ವೀಕರಿಸುವರು. ಬೆಳಗ್ಗೆ 11 ಗಂಟೆಯಿಂದ 2.30ರ ವರೆಗೆ ಅಹವಾಲುಗಳನ್ನು ಸಲ್ಲಿಸಬಹುದು.

Home add -Advt

ಶಂಕರಗೌಡ ಪಾಟೀಲ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಅದಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸಲ್ಲಿಸಲು ಅವಕಾಶವಿದೆ.

ಹೆಚ್ಚಿನ ಮಾಹಿತಿಗೆ ಮೊಬೈಲ್ – 6361616383 ಸಂಖ್ಯೆಯನ್ನು ಸಂಪರ್ಕಿಸಬಹುದು.

Related Articles

Back to top button