Kannada NewsKarnataka NewsLatest

*ಬಿಗ್ ಬಾಸ್ ಖ್ಯಾತಿಯ ತುಕಾಲಿ ಸಂತೋಷ್ ಕಾರು ಅಪಘಾತ; ಆಟೋ ಚಾಲಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಕನ್ನಡ ಸೀಜನ್ -10ರ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತದಲ್ಲಿ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ.

ತುಕಾಲಿ ಸಂತೋಷ್ ಇತ್ತೀಚೆಗೆ ಹೊಸ ಕಾರು ಖರೀದಿಸಿದ್ದರು. ಕುಣಿಗಲ್ ಮಾರ್ಗವಾಗಿ ಹೊಳೆನರಸಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಚ್ 13ರ ಸಂಜೆ ಈ ಅಪಘಾತ ಸಂಭವಿಸಿತ್ತು.

ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಗಾದೇ ಆಟೋ ಚಾಲಕ ಜಗದೀಶ್ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.


Related Articles

Back to top button