
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಆರಾಧ್ಯದೈವ, ತುಳಜಾಪುರದ ಶಕ್ತಿದೇವತೆ ಶ್ರೀ ತುಳಜಾ ಭವಾನಿ ಮಂದಿರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ, ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ದೇವಸ್ಥಾನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ