Kannada NewsKarnataka NewsLatest

*ಭೀಕರ ಸರಣಿ ಅಪಘಾತ: ಲಾರಿ ಚಾಲಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬಂದ ಲಾರಿಯೊಂದು ಹಲವು ವಾಹನಗಳಿಗೆ ಗುದ್ದಿ ಬಳಿಕ ಮತ್ತೊಂದು ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೆಳ್ಳಂ ಬೆಳಿಗ್ಗೆ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ.

Home add -Advt

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ಈ ದುರಂತ ಸಂಭವಿಸಿದೆ. ಈಚರ್ ಲಾರಿ ವೇಗವಾಗಿ ಬಂದು ಸರಣಿ ಅಪಘಾತ ಮಾಡಿದ್ದು, ಬಳಿಕ ಸಿಗ್ನಲ್ ಬಳಿ ನಿಂತಿದ್ದ ಮತ್ತೊಂದು ಲಾರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಚಾಲಕನನ್ನು ವಿಜಯ್ ಎಂದು ಗುರುತಿಸಲಾಗಿದೆ.

ಘಟನೆಯಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು.


Related Articles

Back to top button