
ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್
ಪ್ರಗತಿವಾಹಿನಿ ಸುದ್ದಿ; ತುಮಕೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಮುಖಂಡರೊಬ್ಬರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಗುಬ್ಬಿ ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಉಚ್ಛಾಟನೆಯಾದವರು. ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ ಪ್ರಸನ್ನ ಕುಮಾರ್ ಅವರನ್ನು ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಸನ್ನ ಕುಮಾರ್, ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಾಜಿ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ತಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಪ್ರಚಾರಕ್ಕೆ ಯತ್ನಿಸಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇದೀಗ ಅವರನ್ನು ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ