Kannada NewsKarnataka NewsLatest

*BREAKING: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ: ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾಕ್ಷಿ (7), ವೆಂಕಟೇಶಪ್ಪ (31), ಮಾದಪ್ಪ (35) ಹಾಗೂ ಗವಿಸಿಧಪ್ಪ (41) ಮೃತದುರ್ದೈವಿಗಳು. ಮೃತರು ಕೊಪ್ಪಳ ಜಿಲ್ಲೆಯ ಯಲಬುರ್ಗ ಮೂಲದ ನಿವಾಸಿಗಳು. ಶಬರಿಮಲೆ ಅಯ್ಯಪ್ಪ ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಕ್ರೂಸರ್ ವಾಹನದಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದರು. ಘಟನಾ ಸ್ಥಳಕ್ಕೆ ಕೋರಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button