Kannada NewsKarnataka NewsLatest

*ಹಿಟ್ ಆಂಡ್ ರನ್ ಗೆ ಎರಡು ವರ್ಷದ ಬಾಲಕ ಬಲಿ*

ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಬಾಲಕನಿಗೆ ಕಾರು ಡಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ ಪರಾರಿಯಾಗಿರುವ ಘಟನೆ ನಡೆದಿದೆ.

Home add -Advt

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಸಂತೆದೀಪದ ಬಳಿ ಈ ಘಟನೆ ನಡೆದಿದೆ. ಹುಸೇಫಾ ಅಪಘಾತದಲ್ಲಿ ಸಾವನ್ನಪ್ಪಿರುವ ಬಾಲಕ. ಘಟನೆ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ.

ಅದೇ ಜಾಗದಲ್ಲಿ ಐಷಾರಾಮಿ ಕಾರೊಂದು ವೇಗವಾಗಿ ತೆರಳಿತ್ತು. ಅದೇ ಕಾರು ಬಾಲಕನನ್ನು ಬಲಿ ಪಡೆದಿರುವ ಶಂಕೆ ವ್ಯಕ್ತವಾಗಿದೆ. ಕಾರು ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ. ಘಟನಾಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related Articles

Back to top button