Politics

*ಪತ್ರಕರ್ತನಿಗೆ 1 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನ ಹಿರಿಯ ಪೋಟೋ ಜರ್ನಲಿಸ್ಟ್ ನಾಗರಾಜ್ ಅವರ ಚಿಕಿತ್ಸೆಗಾಗಿ ಒಂದು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ .

Home add -Advt

ಹೃದ್ರೋಗದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೇರಿದ್ದ ಅವರಿಗೆ 3 ಲಕ್ಷಕ್ಕೂ ಹೆಚ್ಚು ವೆಚ್ಚವಾಗಿತ್ತು. ಆರ್ಥಿಕ ತೀವ್ರ ಸಂಕಷ್ಟದಲ್ಲಿ ಇದ್ದ ನಾಗರಾಜ್ ಅವರಿಗೆ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಿದ್ದಾರೆ.

ಸಂಕಷ್ಟದಲ್ಲಿರುವ ಬಗ್ಗೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಗಮನಕ್ಕೆ ತಂದಿದ್ದ
ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು.

ಕೆಯುಡಬ್ಲೂಜೆ ಸಲ್ಲಿಸಿದ ಕೋರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಪರಿಹಾರ ಮಂಜೂರು ಮಾಡಿದ್ದಾರೆ. ಸಮಸ್ಯೆಗೆ ಸ್ಪಂದಿಸಿ ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ‌, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಕೃತಜ್ಞತೆ ಸಲ್ಲಿಸಿದೆ.

Related Articles

Back to top button