Kannada NewsKarnataka NewsLatest

*ನೀರಿಗೆ ಬಿದ್ದ ತಾಯಿ, ಮಕ್ಕಳನ್ನು ರಕ್ಷಿಸಲು ಹೋದ ವ್ಯಕ್ತಿಯೂ ನೀರುಪಾಲು; ನಾಲ್ವರು ದುರಂತ ಅಂತ್ಯ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಸಿದ್ಧಗಂಗಾ ಮಠದ ಬಳಿ ದುರಂತವೊಂದು ಸಂಭವಿಸಿದೆ. ನೀರಿಗೆ ಬಿದ್ದಿದ್ದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಲು ಹೋದ ವ್ಯಕ್ತಿ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಸಿದ್ಧಗಂಗಾ ಮಠದ ಹಿಂಭಾಗದಲ್ಲಿರುವ ಗೋಕಟ್ಟೆಯಲ್ಲಿ ಈ ದುರಂತ ಸಂಭವಿಸಿದೆ. ದನಗಳು ನೀರು ಕುಡಿಯಲು ನಿರ್ಮಿಸಿರುವ ಹೊಂಡಕ್ಕೆ ಕಾಲು ತೊಳೆಯಲು ಇಳಿದಿದ್ದ ಬಾಲಕ ನೀರಿನಲ್ಲಿ ಮುಳುಗಿದ್ದಾನೆ. ಬಾಲಕನನ್ನು ರಕ್ಷಿಸಲು ಹೋದ ತಾಯಿ ಕೂಡ ನೀರು ಪಾಲಾಗಿದ್ದಾರೆ. ಈ ವೇಳೆ ತಾಯಿಯನ್ನು ರಕ್ಷಿಸಲು ಹೋದ ಮತ್ತೊಬ್ಬ ಮಗ ಕೂಡ ನೀರಿನಲ್ಲಿ ಮುಳುಗಿದ್ದಾನೆ. ತಾಯಿ ಹಾಗೂ ಇಬ್ಬರು ಮಕ್ಕಳು ನೀರಿನಲ್ಲಿ ಮುಳುತ್ತಿರುವುದನ್ನು ಕಂಡು ಅವರನ್ನು ರಕ್ಷಿಸಲು ಹೋದ ವ್ಯಕ್ತಿ ಮಹದೇವಪ್ಪ ಎಂಬುವವರು ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Home add -Advt

ಒಬ್ಬರನ್ನು ರಕ್ಷಿಸಲು ಹೋಗಿ ನಾಲ್ವರು ನೀರುಪಾಲಾಗಿ ಸಾವನ್ನಪ್ಪಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button