
ಪ್ರಗತಿವಾಹಿನಿ ಸುದ್ದಿ; ತುಮಕೂರು: ಇಂಗ್ಲೀಷ್ ಓದಲು ಕಷ್ಟ ಅದಕ್ಕೆ ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದಿದ್ದ 7ನೇ ತರಗತಿ ವಿದ್ಯಾರ್ಥಿಗೆ ಮನೆಯವರು ಶಾಲೆಗೆ ಹೋಗುವಂತೆ ಬೈದಿದ್ದಾರೆ. ಇದರಿಂದ ವಿಷಸೇವಿಸಿ ಆತ್ಮಹತ್ಯೆಗೆ ಬಾಲಕ ಯತ್ನಿಸಿದ ಘಟನೆ ತುಮಕೂರು ಜಿಲ್ಲೆ ಊರ್ಡಿಗೆರೆಯಲ್ಲಿ ನಡೆದಿದೆ.
ಊರ್ಡಿಗೆರೆ ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ತನಗೆ ಇಂಗ್ಲೀಷ್ ಕಷ್ಟವಾಗುತ್ತೆ. ಶಾಲೆಗೆ ಹೋಗಲ್ಲ ಮನೆಯಲ್ಲಿ ಪೋಷಕರು ಶಾಲೆಗೆ ಕಳುಹಿಸುತ್ತಾರೆ ಎಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಕುಡಿದ ಬಾಲಕ ಕುಸಿದು ಬಿದ್ದಿದ್ದಾನೆ. ತಕ್ಷಣ ಪೋಷಕರು ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಸಧ್ಯ ಬಾಲಕನ ಚಿಕಿತ್ಸೆ ಮುಂದುವರೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮುಷ್ಕರಕ್ಕೆ ಕರೆ ಕೊಟ್ಟ ಸ್ಟೇಷನ್ ಮಾಸ್ಟರ್ಸ್; ರೈಲ್ವೆ ಸಂಚಾರದಲ್ಲಿ ಭಾರಿ ವ್ಯತ್ಯಯ ಸಾಧ್ಯತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ