Kannada NewsKarnataka NewsLatest

*ಹೊಸ ಬೈಕ್ ಖರೀದಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಹೊಸ ಬೈಕ್​​ ಖರೀದಿಸಿದ ಮರುದಿನವೇ ಭೀಕರ ಅಪಘಾತಕ್ಕೀಡಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಗಂಗಸಾಗರ ಕ್ರಾಸ್ ಬಳಿ ಈ ದುರಂತ ನಡೆದಿದೆ. ನಂದೀಶ್​​ ಕುಮಾರ್​​ (19) ಮೃತದುರ್ದೈವಿಯಾಗಿದ್ದು, ವೇಗವಾಗಿ ಬಂದ ಟಿಪ್ಪರ್​​ ಬೈಕ್​​ಗೆ ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಂದೀಶ್​​ ಮೂಲತಃ ಪಾವಗಡದ ದೊಡ್ಡಹಳ್ಳಿ ನಿವಾಸಿ ಎಂಬುದು ಗೊತ್ತಾಗಿದೆ.

ನಿನ್ನೆಯಷ್ಟೇ ಹೊಸ ಬೈಕ್​​ ಖರೀದಿಸಿದ್ದ ನಂದೀಶ್​​ ಕುಮಾರ್​​ ಸ್ನೇಹಿತನ ಜೊತೆ ಸ್ವಗ್ರಾಮಕ್ಕೆ ಬರುತ್ತಿದ್ದ. ಈ ವೇಳೆ ವೈಎನ್ ಹೊಸಕೋಟೆ ಕಡೆಯಿಂದ ವೇಗವಾಗಿ ಬಂದ ಟಿಪ್ಪರ್ ಬೈಕ್​​ಗೆ ಡಿಕ್ಕಿಯಾಗಿದೆ. ಸ್ಥಳದಲ್ಲೇ ನಂದೀಶ್​​ ಮೃತಪಟ್ಟಿದ್ದರೆ ಹಿಂಬದಿ ಸವಾರ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಾದ್ದಾನೆ. ಘಟನೆ ಸಂಬಂಧ ಪಾವಗಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button