Latest

ಧ್ವಜಸ್ತಂಭ ನಿಲ್ಲಿಸುವ ವೇಳೆ ದುರಂತ; ವಿದ್ಯುತ್ ಸ್ಪರ್ಶಿಸಿ ಬಾಲಕ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ತುಮಕೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ವೆಳೆ ದುರಂತವೊಂದು ಸಂಭವಿಸಿದೆ. ದ್ವಜಾರೋಹಣಕ್ಕಾಗಿ ಕಂಬ ನಿಲ್ಲಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರಿನ ಕರಿಕೆರೆ ಗ್ರಾಮದಲ್ಲಿ ನಡೆದಿದೆ.

16 ವರ್ಷದ ಚಂದನ್ ಮೃತ ಬಾಲಕ. ಧ್ವಜಸ್ತಂಭ ನಿಲ್ಲಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಕರೆಂಟ್ ಶಾಕ್ ಹೊಡೆದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಶಾಂಕ್ ಹಾಗೂ ಪವನ್ ಎಂಬ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button