Kannada NewsKarnataka NewsLatest
*ಎರಡು ಬಸ್ ಗಳ ಮಧ್ಯೆ ಸಿಲುಕಿ ಇಬ್ಬರು ಮಹಿಳೆಯರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ತುಮಕೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಘೋರ ದುರಂತ ಸಂಭವಿಸಿದ್ದು, ಎರಡು ಬಸ್ ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿಯ ಪಂಕಜಮ್ಮ (50), ಪುಟ್ಟತಾಯಮ್ಮ (67) ಮೃತರು. ತುಮಕೂರಿನ ಕೆ.ಎಸ್.ಆರ್.ಟಿ ಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುತ್ತಿದ್ದಾಗ ಇನ್ನೊಂದು ಬಸ್ ನ ಚಾಲಕ ಬಸ್ ನ್ನು ರಿವರ್ಸ್ ತೆಗೆದುಕೊಂಡಿದ್ದಾನೆ. ಈ ವೇಳೆ ಎರಡು ಬಸ್ ಗಳ ಮಧ್ಯೆ ಇಬ್ಬರು ಮಹಿಳೆಯರು ಸಿಲುಕಿಕೊಂಡು, ಹೊರಬರಲಾಗದೇ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಹಿಳೆಯರು ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ಹತ್ತುವ ವೇಳೆ ಈ ದುರಂತ ಸಂಭವಿಸಿದೆ.


