Kannada NewsKarnataka NewsLatest

*ವಿಚ್ಛೇದನ ಕೇಳಿದ ಪತ್ನಿಗೆ ಮಚ್ಚಿನಿಂದ ಹೊಡೆದು ಪರಾರಿಯಾದ ಪತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ವಿಚ್ಛೇದನ ಕೇಳಿದ ಪತ್ನಿಗೆ ಪತಿ ಮಚ್ಚಿನಿಂದ ಹೊಡೆದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಟೆಯಲ್ಲಿ ಈ ಘಟನೆ ನಡೆದಿದೆ. ಪತಿಯ ಮಚ್ಚಿನೇಟಿನಿಂದ ಗಾಯಗೊಂಡಿರುವ ಪತ್ನಿ ನಾಗಮಣಿ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿದ್ದರೆ, ಪತಿ ಮಾರುತಿ ಕೊರಟಗೆರೆ ತಾಲ್ಲೂಕಿನ ದೊಡ್ಡನಹಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರಿನ ಸರ್ಕಾರಿ ಆಸ್ಪತ್ರೆಯ ನರ್ಸ್ ಆಗಿರುವ ನಾಗಮಣಿ ಹಾಗೂ ಮಾರುತಿ ಕಳೆದ 15 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಎರಡು ಮಕ್ಕಳು ಇದ್ದಾರೆ. ಮಾರುತಿ ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ. ನಾಗಮಣಿಗೆ ಮದುವೆ ನಂತರ ಸರ್ಕಾರಿ ನರ್ಸ್ ಕೆಲಸ ಸಿಕ್ಕಿತ್ತು. ಆದ್ರೆ, ಯಾವಾಗ ನಾಗಮಣಿಗೆ ಸರ್ಕಾರಿ ನರ್ಸ್ ಕೆಲಸ ಒಲಿದುಬಂತೋ ಅಂದಿನಿಂದ ಆಕೆಯ ಜೀವನ ಶೈಲಿಯೇ ಬದಲಾಗಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದ ಪತಿ ಮಾರುತಿಯಿಂದ ನಾಗಮಣಿ ವಿವಾಹ ವಿಚ್ಛೇದನ ಪಡೆದುಕೊಳ್ಳಲು ಚಿಂತನೆ ನಡೆಸಿದ್ದಳು.

ಇದರಿಂದ ಪತ್ನಿ ಮೇಲೆ ಅನುಮಾನಗೊಂಡಿದ್ದ ಪತಿ, ನಾಗಮಣಿಗೆ ಮತ್ತೊಬ್ಬನ ಜೊತೆ ಸಂಬಂಧ ಇರುವ ಶಂಕೆಯಲ್ಲಿದ್ದ. ಇದೇ ವಿಚಾರವಾಗಿ ಪತಿ-ಪತ್ನಿ ನಡುವೆ ಗಲಾಟೆಯಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಮೈಸೂರಿನ ಸ್ಥಳೀಯ ಠಾಣೆ ಮೆಟ್ಟಿಲೇರಿತ್ತು. ಇದಾದ ಬಳಿಕ ಮೊನ್ನೆ ಗಂಡನ ಜೊತೆ ಕೋಟೆಯಲ್ಲಿ ವಾಸವಾಗಿದ್ದ ಮಕ್ಕಳ ನೋಡಲು ನಾಗಮಣಿ ಬಂದಿದ್ದಳು. ಈ ವೇಳೆ ದಂಪತಿ ನಡುವೆ ಮತ್ತೆ ಗಲಾಟೆಯಾಗಿದ್ದು, ಈ ಸಂದರ್ಭದಲ್ಲಿ ಮಾರುತಿ, ಮಚ್ಚಿನಿಂದ ನಾಗಮಣಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಬಳಿಕ ಸ್ಥಳೀಯರು ಗಾಯಾಳು ನಾಗಮಣಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಗಮಣಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾಳೆ. ಅತ್ತ ಪರಾರಿಯಾಗಿರುವ ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ

Home add -Advt

Related Articles

Back to top button