Kannada NewsKarnataka NewsLatest

*ನಿವೃತ್ತಿ ಹೊಂದಿದವರ ಹಾಗೂ ಸಾವನ್ನಪ್ಪಿದವರ ಹೆಸರು ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ: ದ್ವಿತೀಯ ದರ್ಜೆ ಸಹಾಯಕಿ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ನಿವೃತ್ತಿ ಹೊಂದಿದವರ ಹಾಗೂ ಮೃತಪಟ್ಟ ಸರ್ಕಾರಿ ನೌಕರರ ಹೆಸರನ್ನು ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ ಪ್ರಕರಣ ತುಮಕೂರುಜಿಲ್ಲೆಯ ಮಧುಗಿರಿಯಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುಗಿರಿ ತಾಲೂಕು ಪಂಚಾಯಿತಿ ದ್ವೊತೀಯ ದರ್ಜೆ ಸಹಾಕಿಯನ್ನು ಅಮಾನತುಗೊಳಿಸಲಾಗಿದೆ. ಸೌಮ್ಯಾ ಅಮಾನತುಗೊಂಡವರು.

Home add -Advt

ಪಂಚಾಯಿತಿ ವ್ಯಾಪ್ತಿಯ ನಿವೃತ್ತಿ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ನಗದೀಕರಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನ ಮೊದಲಿಗೆ ಮೂಡಿತ್ತು. ಬಳಿಕ ಬೆಂಗಳೂರಿನ ಕೇಂದ್ರ ಕಚೇರಿಯಿಂದ ನಡೆದ ಆಡಿಟ್ ವೇಳೆ ದಾಖಲೆಗಳಲ್ಲಿ ವ್ಯತ್ಯಾಸ ಪತ್ತೆಯಾಯಿತು. ಈ ಮಾಹಿತಿ ತುಮಕೂರು ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜಾ ಅವರಿಗೆ ತಲುಪಿದ ನಂತರ ಸಮಗ್ರ ಪರಿಶೀಲನೆ ಕೈಗೊಳ್ಳಲಾಯಿತು.

ತನಿಖೆಯಲ್ಲಿ ನೌಕರರ ರೆಸಿಪಿಯಂಟ್ ಐಡಿ ಮತ್ತು ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆದಾರರ ಹೆಸರಿನಲ್ಲಿ ವ್ಯತ್ಯಾಸ ಕಂಡುಬಂದಿದೆ. ಒಟ್ಟು 21 ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, 18 ನಿವೃತ್ತ ಹಾಗೂ 3 ಮರಣ ಹೊಂದಿದ ನೌಕರರ ಹೆಸರನ್ನು ಬಳಸಿಕೊಂಡು ಅಕ್ರಮ ನಡೆದಿದೆ ಎಂಬುದು ಬಹಿರಂಗವಾಗಿದೆ.

ಕಳೆದ ಐದು ವರ್ಷಗಳಲ್ಲಿ 29 ಬ್ಯಾಂಕ್ ಖಾತೆಗಳ ಮೂಲಕ 118 ವ್ಯವಹಾರಗಳ ಮೂಲಕ ಸುಮಾರು 4.24 ಕೋಟಿ ರೂಪಾಯಿ ಸೌಮ್ಯ ಮತ್ತು ಆಕೆಯ ಕುಟುಂಬದ ಐದು ಸದಸ್ಯರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮಧುಗಿರಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Related Articles

Back to top button