Kannada NewsKarnataka NewsLatest

*ರಾಜ್ಯದಲ್ಲಿ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಕೋವಿಡ್ ಪ್ರಕರಣ; ಮತ್ತೋರ್ವ ವ್ಯಕ್ತಿಯಲ್ಲಿಯೂ ಸೋಂಕು ಪತ್ತೆ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಕರಣ ದಿಢೀರ್ ಏರಿಕೆಯಾಗುತ್ತಿದೆ. ರಾಮನಗರದ ಬಳಿಕ ಇದೀಗ ತುಮಕೂರು ಮೂಲದ ವ್ಯಕ್ತಿಯಲ್ಲಿಯೂ ಸೋಂಕು ದೃಢಪಟ್ಟಿದೆ.

ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಈಗಾಗಲೇ ಓರ್ವ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದಾರೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಟೆಸ್ಟಿಂಗ್ ಪ್ರಮಾಣ ಇಂದಿನಿಂದ ಆರಂಭಿಸಲಾಗಿದ್ದು, ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ.

Home add -Advt

ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹೃದ್ರೋಗ ಸಂಬಂಧ ಜಯದೇವ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಇದೀಗ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಜಯದೇವ ಆಸ್ಪತ್ರೆಯಲ್ಲಿಯೇ ಪ್ರತ್ಯೇಕವಾಗಿ ಸೋಂಕಿತನಿಗೆ ಚಿಕಿತ್ಸೆ ಮಾಡಲಾಗುತ್ತಿದೆ.

ಅಲ್ಲದೇ ಸೋಂಕಿತನ ಸಂಪರ್ಕದಲ್ಲಿರುವ ಕುಟುಂಬ ಸದಸ್ಯರಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾ ಆರೋಗ್ಯಾಧಿಕರಿ ಡಾ.ಮಂಜುನಾಥ್ ತಿಳಿಸಿದ್ದಾರೆ.


Related Articles

Back to top button