Latest

*7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಸ್ನೇಹಿತರೊಂದಿಗೆ ಗಲಾಟೆ ಮಾಡಿಕೊಂಡು 7ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತ್ರಿಶಾಲ್ (13) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಎಂದು ತಿಳಿದುಬಂದಿದೆ. ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ತುಮಕೂರು ನಗರದ ಸರ್ವೋದಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ತ್ರಿಶಾಲ್, ಇಂದು ಬೆಳಿಗ್ಗೆ ಮನೆಯಲ್ಲಿ ಶಾಲೆಯ ಯುನಿಫಾರ್ಮ್ ಧರಿಸಿಯೇ ನೇಣಿಗೆ ಕೊರಳೊಡ್ಡಿದ್ದಾನೆ.

ಪಾರಿವಾಳ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆ ನಡೆದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button