Kannada NewsKarnataka NewsLatest

*ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.

ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಈ ದುರಂತ ನಡೆದಿದೆ. 11 ತಿಂಗಳ ಮಗು ಹಾಗೂ 4 ವರ್ಷದ ಮಗುವಿನೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಹಿಳೆಯ ದುಡುಕಿನ ನಿರ್ಧರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕೆರೆಯಲ್ಲಿ ಮಹಿಳೆ ಹಾಗೂ ಮಕ್ಕಳಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಗುಬ್ಬಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button