Kannada NewsKarnataka NewsLatest

*ಅಡಿಕೆ ಕೊಯ್ಯುವಾಗ ದುರಂತ: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ: ತೋಟದಲ್ಲಿ ಅಡಿಕೆ ಕೊಯ್ಯುವಾಗ ವಿದ್ಯುತ್ ತಂತಿ ತಗುಲಿ ಯುವಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನ ಸೀನಪ್ಪನಹಳ್ಲಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 19 ವರ್ಷದ ಮನೋಜ್ ಮೃತ ಯುವಕ. ನಿನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Home add -Advt

ಮನೋಜ್ ನಿನ್ನೆ ತಂದೆ ಜೊತೆ ತೋಟಕ್ಕೆ ಅಡಿಕೆ ಕೊಯ್ಯಲು ಹೋಗಿದ್ದ. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂಟಿ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Related Articles

Back to top button