Latest

ಬಸ್ ಅಪಘಾತ; ಸಾವನ್ನಪ್ಪಿದ್ದು 5 ಜನ, 12 ಮಂದಿ ಸ್ಥಿತಿ ಗಂಭೀರ; ಎಸ್ ಪಿ ರಾಹುಲ್ ಮಾಹಿತಿ

ಪ್ರಗತಿವಾಹಿನಿ ಸುದ್ದಿ; ತುಮಕೂರು: ತುಮಕೂರಿನ ಪಾವಗಡ ಬಳಿ ಖಾಸಗಿ ಬಸ್ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಎಂಟಲ್ಲ, ಐದು ಜನರು ಮೃತಪಟ್ಟಿದ್ದಾರೆ ಎಂದು ಎಸ್ ಪಿ ರಾಹುಲ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ ಪಿ, ಬಸ್ ದುರಂತದಲ್ಲಿ ಈವರೆಗೆ ಐವದು ಜನರು ಸಾವನ್ನಪ್ಪಿದ್ದು, ಒಟ್ಟು 32 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 12 ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು.

ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷ, ಓವರ್ ಲೋಡ್ ನಿಂದಾಗಿ ದುರಂತ ಸಂಭವಿಸಿದೆ. ತನಿಖೆ ಮುಂದುವರೆದಿದೆ ಎಂದು ತಿಳಿಸಿದರು.
ತಿರುವಿನಲ್ಲಿ ಪಲ್ಟಿಯಾದ ಬಸ್; 8 ಪ್ರಯಾಣಿಕರ ದುರ್ಮರಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button