ಪ್ರಗತಿವಾಹಿನಿ ಸುದ್ದಿ; ತುಮಕೂರು: ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆ ಬಳಿ ನಿನ್ನೆ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ್ದ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದು, ಪರಾರಿಯಾಗಿದ್ದ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಪಘಾತ ಸಂಭವಿಸುತ್ತಿದ್ದಂತೆಯೇ ಚಾಲಕ ರಘು ಪರಾರಿಯಾಗಿದ್ದ. ಪಾವಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬಸ್ ಚಾಲಕ ರಘು ನನ್ನು ಬಂಧಿಸಿರುವ ಪಾವಗಡ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಆದರೆ ಬಸ್ ಚಾಲಕನ ಹೆಸರು ಹಾಕದೇ ಬಸ್ ನಂಬರ್ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ. ಚಾಲಕನ ಅಜಾಗರುಕತೆಯೇ ಘಟನೆಗೆ ಕಾರಣ ಎಂದು ಹೇಳಲಾಗಿದೆ.
ಈ ನಡುವೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ಇಲ್ಲಿದೆ ಸಮಗ್ರ ಮಾಹಿತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ