ಪ್ರಗತಿವಾಹಿನಿ ಸುದ್ದಿ; ತುಮಕೂರು: ದೀಪಾವಳಿಯ ಸಂಭ್ರಮದ ವೇಳೆ ಶೋ ರೂಮ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೊಸ ಬೈಕ್ ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಇಲ್ಲಿನ ಬಿ.ಹೆಚ್.ರಸ್ತೆಯಲ್ಲಿನ ಹೋಂಡಾ ಶೋ ರೂಮ್ ನಲ್ಲಿ ಈ ದುರಂತ ಸಂಭವಿಸಿದೆ. 25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿವೆ.
ಹೊಸ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.