ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವು

ಪ್ರಗತಿವಾಹಿನಿ ಸುದ್ದಿ; ತುಮಕೂರು: ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಅದೇ ಕಾರಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದು 13 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್​ ನಲ್ಲಿ ನಡೆದಿದೆ.

ಇಲ್ಲಿನ ಬ್ಯಾಲದಕೆರೆ ಬಳಿ ಮುಂಜಾನೆ ನಾಲ್ಕು ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ. ಬೆಂಗಳೂರು ಮೂಲದ ಮೂರು ಮಂದಿ ಯುವಕರಿದ್ದ ಬ್ರಿಜಾ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಈ ಕಾರು ಡಿವೈಡರ್ ದಾಟಿ ಮುಂದುಗಡೆ ಬರುತ್ತಿದ್ದ ಟವೇರಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬ್ರಿಜಾ ಕಾರಿನಲ್ಲಿದ್ದ 3 ಮಂದಿ ಮೃತಪಟ್ಟರೆ ಟವೇರಾದಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ.

Home add -Advt

ಮಂಜುನಾಥ್ (35), ತನುಜ (25), ಒಂದು ವರ್ಷದ ಹೆಣ್ಣು ಮಗು, ಗೌರಮ್ಮ (60), ರತ್ನಮ್ಮ (52), ಸುಂದರರಾಜ್ (48), ರಾಜೇಂದ್ರ (27), ಸರಳ (32), ಪ್ರಶನ್ಯಾ (14) ಹಾಗೂ ಕಾರಿನಲ್ಲಿದ್ದ ಲಕ್ಷ್ಮಿ ಕಾಂತ್ (24), ಸಂದೀಪ (36), ಮಧು (28) ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಶ್ವೇತಾ, ಹರ್ಷಿತಾ, ಮಾಲಾಶ್ರೀ, ಗಂಗೋತ್ರಿಯನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ನಿದ್ದೆಯ ಮಂಪರಿನಲ್ಲಿ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

Related Articles

Back to top button