ಪ್ರಗತಿವಾಹಿನಿ ಸುದ್ದಿ; ತುಮಕೂರು: ಶಿವಮೊಗ್ಗದ ಸ್ಫೋಟ ಪ್ರಕರಣ ಬೆನ್ನಲ್ಲೇ ರಾಜ್ಯದ ಮತ್ತೊಂದು ಜಿಲ್ಲೆಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದ್ದು, ಆತಂಕವನ್ನು ಹೆಚ್ಚಿಸಿದೆ.
ತುಮಕೂರು ಜಿಲ್ಲೆ ಮಸ್ಕಲ್ ಗ್ರಾಮದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಸ್ಫೊಟಗೊಂಡಿದ್ದು, ಮನೆ ಸಂಪೂರ್ಣ ಧ್ವಂಸಗೊಂಡಿದೆ. ಮನೆಯಲ್ಲಿದ್ದ ಸುವರ್ಣಮ್ಮ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಕ್ಷ್ಮಿಕಾಂತ್ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಲಕ್ಷ್ಮಿಕಾಂತ್ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಮನೆಯಲ್ಲಿ ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಬಿಸಿಲಿನ ತಾಪಕ್ಕೆ ಜಿಲೆಟಿನ್ ಸ್ಫೋಟಗೊಂಡಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ