
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ತುಂಗಾ ನದಿಯಲ್ಲಿ ಮಿನು ಹಿಡಿಯಲು ಹೋಗಿ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುರುಬರಪಾಳ್ಯದಲ್ಲಿ ನಡೆದಿದೆ.
ಫಯಾಜ್ ಅಹ್ಮದ್ (18) ಹಾಗೂ ಅಜಂ ಖಾನ್ (19) ನೀರುಪಾಲಾಗಿರುವ ಯುವಕರು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿರುವ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು, ನೀರುಪಾಲಾಗಿರುವವರ ಶೋಧ ನಡೆಸಿದ್ದಾರೆ.
ತುಂಗಾ ನದಿಯ ದಡದ ಮೇಲೆ ಯುವಕರ ಬಟ್ಟೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಶೋಧ ಕಾರ್ಯ ಮುಂದುವರೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ