ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಜಯನಗರದ ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ತೆರಳಿ ಕ್ರೆಸ್ಟ್ ಗೇಟ್ ಚೈನ್ ಲಿಂಕ್ ತುಂಡಾಗಿರುವ ಜಾಗವನ್ನು ಪರಿಶೀಲಿಸಿದರು.
ಸಚಿವರಾದ ಶಿವರಾಜ್ ತಂಗಡಗಿ, ಬೋಸರಾಜ್, ಸಂಸದ ತುಕಾರಾಂ, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.
ಡ್ಯಾಂ ಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಟಿ. ಬಿ ಡ್ಯಾಂ ಕ್ರಸ್ಟ್ ಗೇಟ್ ಕಟ್ ಆಗಿ 8 ಟಿಎಂಸಿ ನೀರು ಪೋಲಾಗಿದೆ. ನಿನ್ನೆ ರಾತ್ರಿವರೆಗೆ 10 ಕ್ರಸ್ಟ್ ಗೇಟ್ ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ. 19ನೇ ಗೇಟ್ ಚೈನ್ ತುಂಡಾಗಿ ಮುರುದು ಬಿದ್ದಿದೆ. ಸುರಕ್ಷತೆ ದೃಷ್ಟಿಯಿಂದ 98ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುವುದು. ಮುರಿದು ಬಿದ್ದಿರುವ ಗೇಟ್ ದುರಸ್ತಿ ಮಾಡಲು ನೀರಿನ ಪ್ರಮಾಣ ಇಳಿಸಲಾಗುವುದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ