Politics

*ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿ ಹೋದ ಘಟನೆ: ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.

ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button