ಪ್ರಗತಿವಾಹಿನಿ ಸುದ್ದಿ: ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ಮುರುದು ಬಿದ್ದಿದ್ದು, ಜಲಾಶಯದಿಂದ ಅಪಾರಪ್ರಮಾಣದ ನೀರು ಪೋಲಾಗುತ್ತದೆ. ಅಲ್ಲದೇ ಕಟ್ ಆಗಿರುವ ಗೇಟ್ ಮೇಲಿನ ಒತ್ತಡ ಕಡಿಮೆ ಮಾಡಲು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ತುಂಗಭದ್ರಾ ಜಲಾಶಯದಿಂದ ನದಿಗೆ ಇಂದು ಕೂಡ 1.5 ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.
ಕ್ರಸ್ಟ್ ಗೇಟ್ ರಿಪೇರಿ ಮಾಡಲು ಡ್ಯಾಮ್ ನಲ್ಲಿನ ನೀರನ್ನು ಹಂತಹಂತವಾಗಿ ಖಾಲಿ ಮಾಡಲು ಸಿಬ್ಬಂದಿ ಮುಂದಾಗಿದ್ದಾರೆ. ಹೀಗಾಗಿ ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ನದಿ ಪಾತ್ರದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ನದಿ ತೀರಕ್ಕೆ ಯಾರೂ ತೆರಳಳದಂತೆ ಕೊಪ್ಪಳ, ಗಂಗಾವತಿ, ಕಾರಟಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಡಂಗುರ ಸಾರಿ ಸೂಚನೆ ನೀಡಲಾಗಿದೆ.
ತುಂಗಭದ್ರಾ ಜಲಾಶಯದಿಂದ ನಿನ್ನೆಯಿಂದ 13 ಟಿಎಂಸಿ ನೀರು ಖಾಲಿಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ