Karnataka News

*ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ನ ಚೈನ್ ಲಿಂಕ್ ಕಟ್; ಭಾರಿ ಪ್ರಮಾಣದ ನೀರು ಹೊರಕ್ಕೆ; ಆತಂಕದಲ್ಲಿ ಗ್ರಾಮಸ್ಥರು*

ಪ್ರಗತಿವಾಹಿನಿ ಸುದ್ದಿ: ರಾಜದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕೊಪ್ಪಳ ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ಅವಘಡ ಸಂಭವಿಸಿದ್ದು, ಟಿಬಿ ಡ್ಯಾಂ ನ ಕ್ರಸ್ಟ್ ಗೇಟ್ ಚೈನ್ ಲಿಂಕ್ ಏಕಾಏಕಿ ಕಟ್ ಆದ ಪರಿಣಾಮ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ.

ತುಂಗಭದ್ರಾ ಡ್ಯಾಂನ್ 19ನೇ ಗೇಟ್ ನ ಚೈನ್ ಲಿಂಕ್ ತುಂಡಾಗಿದ್ದು, 1 ಲಕ್ಷ ಕ್ಯೂಸೆಕ್ ಗೂ ಅಧಿಕ ನೀರು ಹರಿದು ಹೋಗುತ್ತಿದ್ದು, ನದಿ ಪಾತ್ರದದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಜಿಲ್ಲಾಡಳಿತದಿಂದ ಗ್ರಾಮಸ್ಥರಿಗೆ ಕಟ್ಟೆಚ್ಚರಿಕೆಗೆ ಸೂಚಿಸಲಾಗಿದೆ.

ತಡ ರಾತ್ರಿ 11 ಗಂಟೆ ಸುಮಾರಿಗೆ ಏಕಾಏಕಿ ಕ್ರಸ್ಟ್ ಗೇಟ್ ನ ಚೈನ್ ಲಿಂಕ್ ಕಟ್ಟಾಗಿದೆ. ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ನೀಡಲಾಗಿದೆ. ಬೆಂಗಳೂರು, ಹೈದರಾಬಾದ್, ಚೆನ್ನೈ ನಿಂದ ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ.

ಈ ಬಗ್ಗೆ ಮಾತನಾಡಿರುವ ಶಾಸಕ ರಾಘವೇಂದ್ರ ಹಿಟ್ನಾಳ್, ಸದ್ಯಕ್ಕೆ ಗೇಟ್ ರಿಪೇರಿ ಕಷ್ಟ ಸಾಧ್ಯ ಎನ್ನಲಾಗುತ್ತಿದೆ. ಹಾಗಾಗಿ ಡ್ಯಾಂ ನ ಒತ್ತಡ ಕಡಿಮೆ ಮಾಡಲು ಇತರ ಗೇಟ್ ಗಳಿಂದಲೂ 1 ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಜನರು ಎಚ್ಚರಿಕೆಯಿಂದ ಇರಬೇಕು. ನದಿಯತ್ತ ತೆರಳದಂತೆ ಸೂಚಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button