ಪ್ರಗತಿವಾಹಿನಿ ಸುದ್ದಿ: ಕೊಪ್ಪಳ ಜಿಲ್ಲೆಯ ಮುನಿರಾಬದ್ ಬಳಿ ತುಂಗಭದ್ರಾ ಡ್ಯಾಂ ನ 19ನೇ ಕ್ರಸ್ಟ್ ಗೇಟ್ ಮುರಿದು ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿರುವ ಪರಿಣಾಮ ಜಲಾಶಯದಿಂದ ಅಪಾರಪ್ರಮಾಣದಲ್ಲಿ ನೀರು ಹೊರಹೋಗುತ್ತಿದ್ದು, ಸುತ್ತಮುತ್ತಲ ಗ್ರಾಮಗಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಮುಂಜಾಗೃತಾ ಕ್ರಮವಾಗಿ ಗ್ರಾಮಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಇನ್ನೊಂದೆಡೆ ಹೊಸ ಕ್ರಸ್ಟ್ ಗೇಟ್ ಕೂಡ ಸಿದ್ಧವಾಗುತ್ತಿದೆ.
ಸಿದ್ಧವಾಗುತ್ತಿರುವ ಹೊಸ ಕ್ರಸ್ಟ್ ಗೇಟ್ ಯಾವರೀತಿಯಿದೆ? ಎಲ್ಲಿ ತಯಾರಾಗುತ್ತಿದೆ ಎಂಬ ಬಗ್ಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಹೊಸಪೇಟೆಯ ನಾರಾಯಣ ಇಂಜಿನಿಯರ್ಸ್ ಗೆ ನಿನ್ನೆ ಭೇಟಿ ನೀಡಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ನಿರ್ಮಾಣದ ಪ್ರಗತಿ ಪರಿಶೀಲನೆ ನಡೆಸಿದೆ. ಈ ಸಂಬಂಧ ಸಚಿವರು, ಶಾಸಕರು ಹಾಗೂ ಇಂಜಿನಿಯರ್‌ಗಳ ಜೊತೆ ಸಭೆ ನಡೆಸಿದ್ದೇನೆ. ಗೇಟ್ ನಿರ್ಮಾಣ ಕಾರ್ಯ ಕ್ಷಿಪ್ರಗತಿಯಲ್ಲಿ ನಡೆಯುತ್ತಿದ್ದು, ಸದ್ಯದಲ್ಲೇ ಅಳವಡಿಕೆ ಕಾರ್ಯ ಪೂರ್ಣಗೊಳ್ಳಲಿದೆ.
ಕಳೆದ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ಆಗಿದೆ. ರೈತರ ಬೆಳೆ ಉಳಿಸುವುದು ನಮ್ಮ ಮುಖ್ಯ ಆದ್ಯತೆಯಾಗಿದೆ. ಬೇರೆ ಜಲಾಶಯಗಳಲ್ಲಿ ಕ್ರಸ್ಟ್ ಗೇಟ್‌ಗೆ ಎರಡು ರೀತಿಯ ಸುರಕ್ಷತೆ ಇರುತ್ತದೆ. ತುಂಗಭದ್ರಾ ಗೇಟ್‌ಗೆ ಒಂದೇ ಚೈನ್ ಇದ್ದ ಕಾರಣ ಅದು ಮುರಿದು ಬಿದ್ದಿದೆ. ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ತ್ವರಿತವಾಗಿ ಕಾಮಗಾರಿ ಮುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ