Kannada NewsKarnataka NewsLatest

*ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ದುರಂತ: ಐವರು ಜಲಸಮಾಧಿ*

ಪ್ರಗತಿವಾಹಿನಿ ಸುದ್ದಿ: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ರಾಯಚೂರು ಬಳಿಯ ಮಂತ್ರಾಲಯ ಬಳಿ ನಡೆದಿದೆ.

ಮೃತರನ್ನು ಹೈದರಾಬಾದ್‌ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Home add -Advt

ಸಂಬಂಧಿಕರ ಮನೆಯಲ್ಲಿನ ಸತ್ಯನಾರಾಯಣ ಪೂಜೆಗೆಂದು ಬಂದಿದ್ದರು. ಕಾರ್ಯಕ್ರಮದ ಬಳಿಕ ಈಜಲೆಂದು ತುಂಗಭದ್ರಾ ನದಿಗೆ ಇಳಿದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಐವರು ಜಲ ಸಮಾಧಿಯಾಗಿದ್ದಾರೆ.

ಮೃತರ ಪೈಕಿ ರಾಘವೇಂದ್ರ, ಸಂಧ್ಯಾ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಸ್ಥಳದಲ್ಲಿ ಶೋಧ ಮುಂದುವರಿದಿದೆ. ಮೃತದೇಹಗಳಿಗಾಗಿ ಮೀನುಗಾರರು ಹುಡುಕಾಟ ನಡೆಸುತ್ತಿದ್ದು ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button